
ಹವಾಮಾನ ಇಲಾಖೆಯ ಪ್ರಕಾರ, ಮುಂದಿನ 6 ದಿನಗಳ ಕಾಲ ಕರ್ನಾಟಕದಾದ್ಯಂತ ಜೋರಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ.
ಆಗಸ್ಟ್ 18 ರಂದು ಉಡುಪಿ ಜಿಲ್ಲೆಯ ಬ್ರಹ್ಮಾವರದ ಕುಂಜಾಲುವಿನಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಅಂದರೆ 107.5 ಮಿ.ಮೀ. ಮಳೆಯಾಗಿದೆ ಎಂದು ಕೆಎಸ್ಎನ್ಡಿಎಂಸಿ ವರದಿ ಮಾಡಿದೆ.
ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಸಂಜೆ 20 ನಿಮಿಷಗಳ ಕಾಲ ಭರ್ಜರಿ ಮಳೆಯಾಗಿದ್ದು, ದಾವಣಗೆರೆಯಲ್ಲೂ ಗಾಳಿ ಸಹಿತ ಮಳೆಯಿಂದಾಗಿ ಕೆಲಕಾಲ ವಿದ್ಯುತ್ ಸಂಪರ್ಕ ವ್ಯತ್ಯಯ ಉಂಟಾಗಿತ್ತು.