
ಶ್ರೀಶೈಲ ಮಲ್ಲಿಕಾರ್ಜುನ ಸೌಹಾರ್ದ ಪತ್ತಿನ ಸಹಕಾರ ಸಂಘವು ಪ್ರಸಕ್ತ ವರ್ಷ ₹79.99 ಲಕ್ಷ ಲಾಭ ಗಳಿಸಿದ್ದು, ಶೇ. 9 ರಷ್ಟು ಡಿವಿಡೆಂಡ್ ವಿತರಿಸಲು ನಿರ್ಧರಿಸಿದೆ.
ಸಂಘದ 18ನೇ ವಾರ್ಷಿಕ ಸಭೆಯನ್ನು ಸೆಪ್ಟೆಂಬರ್ 6 ರಂದು ಬೆಳಿಗ್ಗೆ 11 ಗಂಟೆಗೆ ಬಾದಾಮಿಯ ಹೇಮರಡ್ಡಿ ಮಲ್ಲಮ್ಮ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ.
ಸಭೆಯ ಅಂಗವಾಗಿ ಎಸ್ಎಸ್ಎಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ಗ್ರಾಹಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ಅಧ್ಯಕ್ಷ ವಿ.ಎಸ್. ದೇಸಾಯಿ ತಿಳಿಸಿದ್ದಾರೆ.