
ಭಾರತೀಯ ಆರ್ಥಿಕತೆಯು ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ದೇಶದ ಬ್ಯಾಂಕಿಂಗ್ ವ್ಯವಸ್ಥೆ ಮತ್ತು ಡಿಜಿಟಲ್ ಮೂಲಸೌಕರ್ಯವನ್ನು ಸೈಬರ್ ಭಯೋತ್ಪಾದಕರಿಂದ ರಕ್ಷಿಸುವುದು ತುರ್ತು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.
ಒಡಿಶಾದ ಭುವನೇಶ್ವರದಲ್ಲಿ 169 ಕೋಟಿ ರೂ. ವೆಚ್ಚದ ಅತ್ಯಾಧುನಿಕ ಡೇಟಾ ಸೆಂಟರ್ ಮತ್ತು ಸೈಬರ್ ಭದ್ರತಾ ತರಬೇತಿ ಸಂಸ್ಥೆಯನ್ನು ಆರ್ಬಿಐ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಉದ್ಘಾಟಿಸಿದರು.
ಹಳೆಯ ತರಬೇತಿ ವಿಧಾನಗಳಿಂದ ಹೊಸ ಸೈಬರ್ ಬೆದರಿಕೆಗಳನ್ನು ಎದುರಿಸಲು ಸಾಧ್ಯವಿಲ್ಲವೆಂದ ಅವರು, ಕೃತಕ ಬುದ್ಧಿಮತ್ತೆ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.