
ಸಚಿವ ಪ್ರಿಯಾಂಕ್ ಖರ್ಗೆ ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಯನ್ನು ರಾಯಚೂರಿನಲ್ಲಿ ಬಂಧಿಸಲಾಗಿದೆ.
ಸಿಂಧನೂರು ತಾಲೂಕಿನ ಹುಡಾ ಗ್ರಾಮದ ನಿವಾಸಿ ಪಂಪೇಶ್ ಬಂಧಿತ ಆರೋಪಿಯಾಗಿದ್ದು, ಇಂದಿರಾ ಗಾಂಧಿ ಅವರ ಫೋಟೋಗೆ ಸಚಿವರ ಮುಖವನ್ನು ಮಾರ್ಫ್ ಮಾಡಿದ್ದನು.
ರಾಮಣ್ಣ ಗೋನ್ವಾರ್ ಎಂಬುವವರು ನೀಡಿದ ದೂರಿನ ಮೇರೆಗೆ ಸಿಂಧನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.