
ಬೆಂಗಳೂರಿನಲ್ಲಿ ಮಳೆ ನಿಂತು ಬಿಸಿಲು ಹೆಚ್ಚಾಗುತ್ತಿರುವುದರಿಂದ ಮನೆಗಳೊಳಗೆ ಹಾವುಗಳು ಪ್ರತ್ಯಕ್ಷಗೊಳ್ಳುತ್ತಿದ್ದು, ಬಿಬಿಎಂಪಿ ಸಹಾಯವಾಣಿಗೆ ಮೂರು ದಿನಗಳಲ್ಲಿ 200ಕ್ಕೂ ಹೆಚ್ಚು ಕರೆಗಳು ಬಂದಿವೆ.
ರಾಜ್ಯದಲ್ಲಿ ಹಾವು ಕಡಿತ ಪ್ರಕರಣಗಳು ಏರಿಕೆಯಾಗಿದ್ದು, ಕಳೆದ ಒಂದು ವಾರದಲ್ಲೇ 702 ಮಂದಿ ಹಾವು ಕಡಿತಕ್ಕೆ ಒಳಗಾಗಿ ಆರು ಮಂದಿ ಮೃತಪಟ್ಟಿದ್ದಾರೆ.
ಜನವರಿಯಿಂದ ಈವರೆಗೆ ರಾಜ್ಯದಲ್ಲಿ ಒಟ್ಟು 17,608 ಹಾವು ಕಡಿತ ಪ್ರಕರಣಗಳು ವರದಿಯಾಗಿದ್ದು 205 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.