
2026-27ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಕಟಿಸಿದೆ.
ಕರ್ನಾಟಕದಲ್ಲಿ ಫೆಬ್ರವರಿ 27ರಂದು ಕನ್ನಡ ಮತ್ತು ಅರೇಬಿಕ್ ಪರೀಕ್ಷೆಯೊಂದಿಗೆ ಆರಂಭವಾಗಿ ಮಾರ್ಚ್ 18ರವರೆಗೆ ಪರೀಕ್ಷೆಗಳು ಜರುಗಲಿವೆ.
ಮಂಡಳಿಯು ಎಲ್ಲಾ ಪರೀಕ್ಷೆಗಳನ್ನು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ನಡೆಸಲು ನಿರ್ಧರಿಸಿದೆ.