
ಮೈಸೂರಿನ ಕುವೆಂಪುನಗರ ಬಡಾವಣೆಯಲ್ಲಿ ನಿರ್ಮಿಸಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೂತನ ಮನೆಯ ಗೃಹಪ್ರವೇಶ ಸಮಾರಂಭವು ವಿಜೃಂಭಣೆಯಿಂದ ನೆರವೇರುತ್ತಿದೆ.
ಗೃಹಪ್ರವೇಶದ ಅಂಗವಾಗಿ ಭಾನುವಾರ ರಾತ್ರಿಯಿಂದಲೇ ಗಣಹೋಮ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ಹಾಗೂ ಶಾಸ್ತ್ರೋಕ್ತ ಪೂಜೆಗಳು ಆರಂಭಗೊಂಡಿದ್ದವು.
ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸಿದ್ದರಾಮಯ್ಯ ಹಾಗೂ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಕುಟುಂಬದ ಎಲ್ಲ ಸದಸ್ಯರು ಭಾಗವಹಿಸಿದ್ದರು.