
ಕರ್ನಾಟಕವು ಅಕ್ಟೋಬರ್ 23ರಿಂದ ಕಾವೇರಿ ನದಿ ನೀರನ್ನು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ತುರ್ತು ಅರ್ಜಿ ಸಲ್ಲಿಸಿದೆ. ನಿತ್ಯ 3,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಆದೇಶಿಸಬೇಕೆಂದು ಕೋರಿದೆ.
ಕರ್ನಾಟಕ ನೀರು ಹರಿಸದ ಕಾರಣ ತಮಿಳುನಾಡಿನ ಸುಮಾರು ನಾಲ್ಕು ಲಕ್ಷ ಹೆಕ್ಟೇರ್ ಕೃಷಿ ಭೂಮಿ ಮತ್ತು ಬೆಳೆಗಳಿಗೆ ತೀವ್ರ ಅಪಾಯ ಎದುರಾಗಿದೆ ಎಂದು ತಮಿಳುನಾಡು ಪರ ವಕೀಲರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಪೀಠದ ಗಮನಕ್ಕೆ ತಂದಿದ್ದಾರೆ.
ತಮಿಳುನಾಡಿನ ತುರ್ತು ವಿಚಾರಣೆ ಮನವಿಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದ್ದು, ಪ್ರಕರಣದ ವಿಚಾರಣೆಯನ್ನು ಶೀಘ್ರದಲ್ಲೇ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.