
ನೇಪಾಳ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 750ಕ್ಕೆ ಏರಿಕೆಯಾಗಿದ್ದು, 320 ಭಾರತೀಯರು ಸೇರಿದಂತೆ 3,000ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.
ಆಗಸ್ಟ್ 26ರಂದು ಭೋಟೆ ಕೋಶಿ ಮತ್ತು ತ್ರಿಶೂಲಿ ನದಿಯ ದಡದಲ್ಲಿ ಅಪ್ಪಳಿಸಿದ ಕೆಸರುಮಿಶ್ರಿತ ಪ್ರವಾಹಕ್ಕೆ ಹಿಮಬಂಡೆಗಳು ಕುಸಿದಿರುವುದೇ ಕಾರಣ ಎಂದು ಯುಎಸ್‌ಜಿಎಸ್ ತಿಳಿಸಿದೆ.
ಸಹಾಯಕ್ಕಾಗಿ ಕಠ್ಮಂಡುವಿನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು +977 985 131 6807 ಅಥವಾ +977 970 910 7500 ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ.