
ಕರ್ನಾಟಕ ಅರಣ್ಯ ಇಲಾಖೆಯು 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ತಾಂತ್ರಿಕ ಕಾರಣಗಳಿಂದಾಗಿ ಅರ್ಜಿ ಸಲ್ಲಿಸುವ ಗಡುವನ್ನು ಸೆಪ್ಟೆಂಬರ್ 07ರವರೆಗೆ ವಿಸ್ತರಿಸಲಾಗಿದೆ.
ಈ ನೇಮಕಾತಿಗೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ಇರುವುದಿಲ್ಲ, 10th Standard (SSLC) ಅಂಕಗಳ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ದೈಹಿಕ ಪರೀಕ್ಷೆಗೆ ಕರೆಯಲಾಗುತ್ತದೆ.
ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ ಮತ್ತು ಚಾಮರಾಜನಗರದಲ್ಲಿ ಗರಿಷ್ಠ 169 ಹುದ್ದೆಗಳಿದ್ದು, ರಾಜ್ಯದ ವಿವಿಧ ವೃತ್ತಗಳಲ್ಲಿ ಒಟ್ಟು 750 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.