
ಗುಜರಾತ್‌ನಲ್ಲಿ ವೃದ್ಧರೊಬ್ಬರನ್ನು ಗುರಿಯಾಗಿಸಿಕೊಂಡು ನಡೆದ 11.42 ಕೋಟಿ ರೂ ಮೌಲ್ಯದ ಡಿಜಿಟಲ್ ಅರೆಸ್ಟ್ ಸೈಬರ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದೆ.
ಮ್ಯೂಲ್ ಖಾತೆಗಳನ್ನು ನಿರ್ವಹಿಸುತ್ತಿದ್ದ ಹಾಗೂ ಹವಾಲಾ ಮಾರ್ಗದಲ್ಲಿ ಹಣ ರವಾನಿಸುತ್ತಿದ್ದ ಜಾಲದಲ್ಲಿ ಈ ಆರೋಪಿಗಳು ಸಕ್ರಿಯರಾಗಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.
ಕಳೆದ ಒಂದು ತಿಂಗಳಲ್ಲಿ ಸಿಬಿಐ ದೇಶಾದ್ಯಂತ ಕಾರ್ಯಾಚರಣೆ ನಡೆಸಿ ಈ ಪ್ರಕರಣದಲ್ಲಿ ಒಟ್ಟು 17 ಮಂದಿಯನ್ನು ಬಂಧಿಸಿದೆ.