
ನವದೆಹಲಿಯ ದ್ವಾರಕಾದಲ್ಲಿ ರಕ್ಷಣಾ ಸಚಿವಾಲಯದ ಸಹಾಯಕ ವಿಭಾಗ ಅಧಿಕಾರಿಯಾಗಿದ್ದ 30 ವರ್ಷದ ನಾಜಿಯಾ ಖಾನಮ್ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮೃತರು ಮೂರು ತಿಂಗಳ ಗರ್ಭಿಣಿಯಾಗಿದ್ದು, ಪತಿ ಅಜಮ್ ಅಲಿ ಖಾನ್ ಹಾಗೂ ಅತ್ತೆ-ಮಾವನವರು ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿ ಕೊಲೆ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
ಆಗಸ್ಟ್ 21 ರಂದು ಘಟನೆ ನಡೆದಿದ್ದು, ಪೊಲೀಸರು ವರದಕ್ಷಿಣೆ ಸಾವು ಮತ್ತು ಕೌಟುಂಬಿಕ ಹಿಂಸಾಚಾರದ ಕೋನದಲ್ಲಿ ಪತಿ ಹಾಗೂ ಆತನ ಕುಟುಂಬವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.