
ರಾಜ್ಯದಲ್ಲಿ ಬರಗಾಲದಿಂದಾಗಿ ಆಹಾರ ಉತ್ಪಾದನೆಗೆ ಶೇ. 82ರಷ್ಟು ನಷ್ಟ ಸಂಭವಿಸಿದ್ದು, ಕೇಂದ್ರದ ಅನುದಾನಕ್ಕಾಗಿ ಕಾಯದೆ ರಾಜ್ಯ ಸರ್ಕಾರದಿಂದಲೇ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಡಿಸಿಎಂ ಜಿ. ಪರಮೇಶ್ವರ್ ತಿಳಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ನಿಧಿ ಮಾರ್ಗಸೂಚಿಗಳ ಅನ್ವಯ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲು ಮೂರನೇ ಮನವಿ ಪತ್ರವನ್ನು ಸಿದ್ಧಪಡಿಸಲಾಗುತ್ತಿದ್ದು, ಒಂದೆರಡು ದಿನಗಳಲ್ಲಿ ಸಲ್ಲಿಸಲಾಗುವುದು ಎಂದಿದ್ದಾರೆ.
ರೈತರಿಗೆ ತಲಾ ₹2,500 ನೀಡುವುದಕ್ಕಾಗಿಯೇ ರಾಜ್ಯ ಸರ್ಕಾರವು ಸುಮಾರು ₹1ಜಿ,250 ಕೋಟಿ ವೆಚ್ಚವನ್ನು ತನ್ನ ಸಂಪನ್ಮೂಲದಿಂದಲೇ ಭರಿಸುತ್ತಿದೆ ಎಂದು ಅವರು ವಿವರಿಸಿದ್ದಾರೆ.