
ಮಂಗಳೂರಿನಲ್ಲಿ ಚರ್ಚ್ಗೆ ಬರುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕ್ಯಾಥೋಲಿಕ್ ಪ್ರೀಸ್ಟ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಚಾಕೊಲೇಟ್ ಆಮಿಷವೊಡ್ಡಿ, ಆಕರ್ಷಿಸಿ, ನಂತರ ಲೈಂಗಿಕವಾಗಿ ಕಿರುಕುಳ ನೀಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಬಾಲಕನ ಸ್ನೇಹಿತರೂ ಇದೇ ಪ್ರೀಸ್ಟ್ನಿಂದ ದೌರ್ಜನ್ಯಕ್ಕೆ ಒಳಗಾಗಿದ್ದರು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.