
ಭಾರತರತ್ನ ಪುರಸ್ಕೃತೆ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಜೀವನಾಧಾರಿತ ಬಯೋಪಿಕ್ನಲ್ಲಿ ನಟಿಸಲು ರಶ್ಮಿಕಾ ಮಂದಣ್ಣ ಆಯ್ಕೆಯಾಗಿದ್ದು, ಸೆಪ್ಟೆಂಬರ್ 16ರಂದು ಅಧಿಕೃತ ಘೋಷಣೆ ಹೊರಬೀಳಲಿದೆ.
ಈ ಚಿತ್ರವನ್ನು ನಿರ್ದೇಶಕ ಗೌತಮ್ ತಿನ್ನನುರಿ ನಿರ್ದೇಶಿಸುತ್ತಿದ್ದು, ರಾಕ್ಲೈನ್ ವೆಂಕಟೇಶ್, ಅಲ್ಲು ಅರವಿಂದ್ ಮತ್ತು ಬನ್ನಿ ವಾಸ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.
ಆರಂಭದಲ್ಲಿ ಸಾಯಿ ಪಲ್ಲವಿ ಮತ್ತು ರುಕ್ಮಿಣಿ ವಸಂತ್ ಅವರ ಹೆಸರುಗಳು ಕೇಳಿಬಂದಿದ್ದರೂ, ಅಂತಿಮವಾಗಿ ರಶ್ಮಿಕಾ ಮಂದಣ್ಣ ಅವರನ್ನು ಈ ಸವಾಲಿನ ಪಾತ್ರಕ್ಕೆ ಆಯ್ಕೆ ಮಾಡಲಾಗಿದೆ.