
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಂಚಿನಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಪಾಕಿಸ್ತಾನಿ ಪತ್ರಕರ್ತನೊಬ್ಬ ಭಾರತವು ಪಾಕಿಸ್ತಾನದಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸುತ್ತಿದೆ ಎಂದು ಆರೋಪಿಸಲು ಯತ್ನಿಸಿದನು.
ಲೈಬೀರಿಯಾದ ವಿದೇಶಾಂಗ ಸಚಿವೆ ಸಾರಾ ಬೈಸೋಲೊ ನ್ಯಾಂಟಿ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಈ ಹೈಡ್ರಾಮಾ ನಡೆಯಿತು.
ಇದಕ್ಕೆ ತಕ್ಕ ತಿರುಗೇಟು ನೀಡಿದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು "ಭಯೋತ್ಪಾದಕ ದೇಶವೊಂದು ನನ್ನನ್ನು ಈ ಪ್ರಶ್ನೆ ಕೇಳುತ್ತಿದೆಯೇ?" ಎಂದು ಪ್ರಶ್ನಿಸುವ ಮೂಲಕ ಪತ್ರಕರ್ತನ ಮೈಚಳಿ ಬಿಡಿಸಿದರು.