
ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ತಮ್ಮ ಮೊದಲ ಪಂದ್ಯಶ್ರೇಷ್ಠ ಪ್ರಶಸ್ತಿ ಗೆಲ್ಲುವ ಗುರಿ ಹೊಂದಿದ್ದಾರೆ.
ಒಂದು ವೇಳೆ ಕೊಹ್ಲಿ ಈ ಸಾಧನೆ ಮಾಡಿದರೆ, SENA ದೇಶಗಳಾದ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾದಲ್ಲಿ ಈ ಪ್ರಶಸ್ತಿ ಗೆದ್ದ ನಾಲ್ಕನೇ ಭಾರತೀಯ ಆಟಗಾರ ಎನಿಸಿಕೊಳ್ಳಲಿದ್ದಾರೆ.
ನ್ಯೂಜಿಲೆಂಡ್ ನೆಲದಲ್ಲಿ ಈವರೆಗೆ 13 ಏಕದಿನ ಪಂದ್ಯಗಳನ್ನು ಆಡಿರುವ ಕೊಹ್ಲಿ 49.96 ಸರಾಸರಿಯಲ್ಲಿ 596 ರನ್ ಗಳಿಸಿದ್ದು, ಇದರಲ್ಲಿ ಒಂದು ಶತಕ ಮತ್ತು ನಾಲ್ಕು ಅರ್ಧಶತಕಗಳು ಸೇರಿವೆ.