
ಗುರುಗ್ರಾಮ್ನ ಸೆಕ್ಟರ್ 68ರ ಅಪಾರ್ಟ್ಮೆಂಟ್ನಲ್ಲಿ ಬೆಂಗಳೂರು ಮೂಲದ ಸಾಫ್ಟ್ವೇರ್ ಎಂಜಿನಿಯರ್ ಮೊಹಮ್ಮದ್ ಅಸ್ಲಂ ಮತ್ತು ಅವರ ಪತ್ನಿ ಫರ್ಹಾನಾ ಮೃತದೇಹಗಳು ಪತ್ತೆಯಾಗಿವೆ.
ಪತ್ನಿಯನ್ನು ಉಸಿರುಗಟ್ಟಿಸಿ ಕೊಂದು, ಬಳಿಕ ಪತಿಯೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ ಅಸ್ಲಂ ತನ್ನ ಕಂಪನಿಯ ಅಧಿಕಾರಿಗಳಿಗೆ ಇಮೇಲ್ ಕಳುಹಿಸಿ ಈ ಬಗ್ಗೆ ಮಾಹಿತಿ ನೀಡಿದ್ದರು.
ಪೊಲೀಸರು ಮತ್ತು ವಿಧಿವಿಜ್ಞಾನ ತಂಡ ಫ್ಲ್ಯಾಟ್ನಲ್ಲಿ ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಘಟನೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.