
ದೆಹಲಿಯಲ್ಲಿ 'ಇಂಡಿ' ಮೈತ್ರಿಕೂಟದ ಸಂಸದರು ಚುನಾವಣಾ ಆಯೋಗದ ಕಚೇರಿಯತ್ತ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆ ವೇಳೆ ಹೈಡ್ರಾಮಾ ನಡೆದಿದೆ.
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಯಿತು.
ಆಕಾಶವಾಣಿ ಭವನದ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದಿದ್ದರಿಂದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ರಸ್ತೆಯಲ್ಲೇ ಕುಳಿತು ಧರಣಿ ನಡೆಸಿದರು.