
ಕರ್ನಾಟಕದಲ್ಲಿ ನೂತನವಾಗಿ ಪ್ರಮಾಣವಚನ ಸ್ವೀಕರಿಸಿದ 19 ಸಚಿವರಿಗೆ ಇಂದು ರಾತ್ರಿಯೊಳಗೆ ಖಾತೆಗಳನ್ನು ಹಂಚಿಕೆ ಮಾಡುವ ಸಾಧ್ಯತೆ ಇದೆ.
ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ತಡರಾತ್ರಿ ಹೈಕಮಾಂಡ್ ನಾಯಕರೊಂದಿಗೆ ಒಂದು ಸುತ್ತಿನ ಸಭೆ ನಡೆಸಿದ್ದಾರೆ.
ಖಾತೆ ಹಂಚಿಕೆಯ ನಂತರ ಅಸಮಾಧಾನ ಭುಗಿಲೇಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಯಾವುದೇ ಖಾತೆ ನೀಡಿದರೂ ಕಾರ್ಯ ನಿರ್ವಹಿಸುವಂತೆ ಸಚಿವರಿಗೆ ಸಂದೇಶ ರವಾನಿಸಲಾಗಿದೆ.