
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕರ್ನಾಟಕ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ನಡೆಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು, ಜನವರಿ ಮೊದಲ ವಾರದಲ್ಲಿ ಚುನಾವಣೆ ನಡೆಸಲು ಸಂಪುಟ ಒಲವು ತೋರಿದೆ.
ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳ ಬಳಿಕ ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ಸಹ ನಿರ್ಧರಿಸಲಾಗಿದೆ.