
ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ಮತ್ತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡುವಿನ ಪ್ರಕರಣ ಇತ್ಯರ್ಥಕ್ಕೆ ಹೈಕೋರ್ಟ್ ನಡೆಸಿದ ರಾಜಿ ಸಂಧಾನ ಯತ್ನ ವಿಫಲವಾಗಿದೆ.
ಹೈಕೋರ್ಟ್ ನೇಮಿಸಿದ್ದ ಮಧ್ಯಸ್ಥಿಕೆದಾರರ ಸಮ್ಮುಖದಲ್ಲಿ ನಡೆದ ಮಾತುಕತೆ ಫಲಪ್ರದವಾಗದ ಹಿನ್ನೆಲೆಯಲ್ಲಿ, ನ್ಯಾಯಾಲಯವು ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 20ಕ್ಕೆ ನಿಗದಿಪಡಿಸಿದೆ.
ಸಾಯಿ ಮಿನರಲ್ಸ್ ಗಣಿ ಗುತ್ತಿಗೆ ಪ್ರಕರಣದ ಹಿನ್ನೆಲೆಯಲ್ಲಿ ಉಂಟಾದ ಜಟಾಪಟಿ ಬಳಿಕ, ಪರಸ್ಪರ ದೂರು ದಾಖಲಿಸಿಕೊಂಡಿದ್ದರಿಂದ ಈ ಕಾನೂನು ಹೋರಾಟ ಮುಂದುವರಿದಿದೆ.