
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ಗ್ರಾಮದ ದೇವಸ್ಥಾನದಲ್ಲಿ ಕರ್ತವ್ಯನಿರತ ಪಿಎಸ್ಐ ಸವಿತಾ ಅವರ ಮೇಲೆ ಶಾಸಕ ಬಿ. ಸುರೇಶ್ಗೌಡ ಅವರ ಪುತ್ರಿ ಐಶ್ವರ್ಯ ಹಲ್ಲೆ ನಡೆಸಿದ್ದಾರೆ.
ಆಗಸ್ಟ್ 12ರಂದು ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ದೇವಸ್ಥಾನದ ಗರ್ಭಗುಡಿಯೊಳಗೆ ಪ್ರವೇಶಿಸಲು ಯತ್ನಿಸಿದ ಐಶ್ವರ್ಯ ಅವರನ್ನು ತಡೆದಿದ್ದಕ್ಕೆ ಪಿಎಸ್ಐ ಸವಿತಾ ಅವರ ಕಪಾಳಕ್ಕೆ ಹೊಡೆಯಲಾಗಿದೆ.
ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಹಲ್ಲೆ ನಡೆಸಿದ ಆರೋಪದ ಮೇಲೆ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಐಶ್ವರ್ಯ ವಿರುದ್ಧ ಪ್ರಕರಣ ದಾಖಲಾಗಿದೆ.