
ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಸಮೀಪ ನಡೆದ ಹಿಟ್-ಅಂಡ್-ರನ್ ಘಟನೆಯಲ್ಲಿ 25 ವರ್ಷದ ಬಾಣಸಿಗ ರಂಜಿತ್ ಕುಮಾರ್ ಸಾಹು ದುರ್ಮರಣಕ್ಕೀಡಾಗಿದ್ದಾರೆ.
ರಸ್ತೆ ದಾಟುತ್ತಿದ್ದಾಗ ಕಾರು ಅಪಾಯಕಾರಿ ರೀತಿಯಲ್ಲಿ ಸಾಗಿದ್ದನ್ನು ಪ್ರಶ್ನಿಸಿದ ಕಾರಣಕ್ಕಾಗಿ ನಡೆದ ಮಾತಿನ ಚಕಮಕಿಯ ಬಳಿಕ ಆರೋಪಿಗಳು ಕಾರನ್ನು ಯುವಕನ ಮೇಲೆ ಹಾಯಿಸಿದ್ದಾರೆ.
ಕುಡಿತದ ಅಮಲಿನಲ್ಲಿ ಈ ಕೃತ್ಯ ಎಸಗಿರುವ ಕುರಿತು ವಿಚಾರಣೆ ವೇಳೆ ಬಾಯಿಬಿಟ್ಟಿರುವ ಅಜಯ್ ರಬಿದಾಸ್ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.