
ಬೆಳಗಾವಿ ಜಿಲ್ಲೆಯ ಎಂ.ಕೆ. ಹುಬ್ಬಳ್ಳಿ ಪಟ್ಟಣದ ಸಮೀಪ ಅಕ್ರಮವಾಗಿ 24 ಸಾವಿರ ಲೀಟರ್ ಮದ್ಯ ಸಾಗಿಸುತ್ತಿದ್ದ ಟ್ಯಾಂಕರ್ ಅನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಶನಿವಾರ ಮಧ್ಯರಾತ್ರಿ ವಾಹನ ತಪಾಸಣೆ ವೇಳೆ ಈ ಕಾರ್ಯಾಚರಣೆ ನಡೆದಿದ್ದು, ವಶಪಡಿಸಿಕೊಂಡ ಟ್ಯಾಂಕರ್ ಹಾಗೂ ಮದ್ಯದ ಒಟ್ಟು ಮೌಲ್ಯ ₹32.40 ಲಕ್ಷ ಎಂದು ಅಂದಾಜಿಸಲಾಗಿದೆ.
ಚಾಲಕನಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿರುವ ಅಧಿಕಾರಿಗಳು, ವಾಹನದ ಮಾಲೀಕನ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ.