
ಯಾದಗಿರಿ ರೈಲ್ವೆ ಸ್ಟೇಷನ್ ಏರಿಯಾದಲ್ಲಿ 22 ವರ್ಷದ ಮಹಿಳೆಯೊಬ್ಬರ ಮೇಲೆ ಇಬ್ಬರು ರೈಲ್ವೆ ಪೊಲೀಸರು ಸೇರಿದಂತೆ ಆರು ಜನರ ವಿರುದ್ಧ ಸಾಮೂಹಿಕ ಅತ್ಯಾಚಾರವೆಸಗಿರುವ ಗಂಭೀರ ಆರೋಪ ಕೇಳಿಬಂದಿದೆ.
ವಿಶ್ರಾಂತಿ ಗೃಹದಲ್ಲಿದ್ದ ಮಹಿಳೆಯನ್ನು ಮಲ್ಲಿಕಾರ್ಜುನ ಎಂಬಾತ ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿ, ಬಳಿಕ ಇತರರೊಂದಿಗೆ ಸೇರಿ ಜೀವಬೆದರಿಕೆ ಹಾಕಿ ಲಾಡ್ಜ್‌ಗಳಲ್ಲಿ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಒಟ್ಟು ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮಲ್ಲಿಕಾರ್ಜುನ ಹಾಗೂ ಮಹೇಶ್ ಎಂಬುವವರನ್ನು ಬಂಧಿಸಿ ತಲೆಮರೆಸಿಕೊಂಡಿರುವ ಇತರರಿಗಾಗಿ ಶೋಧ ನಡೆಸುತ್ತಿದ್ದಾರೆ.