
ಶಿವಮೊಗ್ಗ ಜಿಲ್ಲೆಯಲ್ಲಿ 2026-27ನೇ ಸಾಲಿನಲ್ಲಿ ಸರ್ಕಾರಿ ಪೂರ್ವ ಪ್ರಾಥಮಿಕ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಒಟ್ಟು 14,000ಕ್ಕೂ ಹೆಚ್ಚು ಮಕ್ಕಳು ದಾಖಲಾತಿ ಪಡೆದಿದ್ದಾರೆ.
ಜಿಲ್ಲೆಯ 248 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ಆರಂಭಿಸಲು ಅನುಮತಿ ನೀಡಲಾಗಿದ್ದು, 450 ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ 8,074 ಮಕ್ಕಳಿಗೆ ಪ್ರವೇಶ ಕಲ್ಪಿಸಲಾಗಿದೆ.
ಪಿಎಂ-ಪೋಷಣ್ ಯೋಜನೆಯಡಿ ಈ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಕ್ಷೀರಭಾಗ್ಯ ಯೋಜನೆಯಡಿ ಹಾಲು, ಮೊಟ್ಟೆ ಅಥವಾ ಬಾಳೆಹಣ್ಣನ್ನು ರಾಜ್ಯ ಸರ್ಕಾರ ವಿತರಿಸುತ್ತಿದೆ.