
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಚಿಂದೇನಹಳ್ಳಿ ಗಡಿಯಲ್ಲಿ ನಡೆದ ಕುರುಕ್ಷೇತ್ರ ನಾಟಕದಲ್ಲಿ ಅಬಕಾರಿ ಸಚಿವ ಶಿವಲಿಂಗೇಗೌಡ ಅವರು ಭೀಮನ ಪಾತ್ರದಲ್ಲಿ ಕಾಣಿಸಿಕೊಂಡು ಸಂಭಾಷಣೆ ಹೇಳಿದ್ದಾರೆ.
ಗ್ರಾಮಸ್ಥರ ಒತ್ತಾಯದ ಮೇರೆಗೆ ಗದೆ ಹಿಡಿದು ನಾಟಕದಲ್ಲಿ ಭಾಗವಹಿಸಿದ ಸಚಿವರ ಅಭಿನಯಕ್ಕೆ ಪ್ರೇಕ್ಷಕರು ಶಿಳ್ಳೆ ಮತ್ತು ಚಪ್ಪಾಳೆಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಜಾ ಸೇವೆ ಆಂದೋಲನ ಸಭೆಯನ್ನು ಮುಗಿಸಿ ಸಚಿವರು ನಾಟಕ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ್ದಾಗ ಈ ಘಟನೆ ನಡೆದಿದೆ.