
3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗಾಗಿ ಇಂದು ರಾಜ್ಯಾದ್ಯಂತ ಲಿಖಿತ ಪರೀಕ್ಷೆ ನಡೆಯುತ್ತಿದ್ದು, ಸುಮಾರು 4.5 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.
ಹಿಂದಿನ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್‌ಗಳನ್ನು ಅಳವಡಿಸಲಾಗಿದ್ದು, ಮೊಬೈಲ್ ಫೋನ್‌ಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಅಭ್ಯರ್ಥಿಗಳ ಆಧಾರ್ ಕಾರ್ಡ್ ಮತ್ತು ಅರ್ಜಿ ನಮೂನೆಗಳನ್ನು ಪರಿಶೀಲಿಸಿದ ನಂತರವೇ ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.