
2026-27ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆ-01ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಗುರುವಾರ ಪ್ರಕಟಿಸಿದೆ.
ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ಎಸ್ಸೆಸೆಲ್ಸಿ ಪರೀಕ್ಷೆಗಳು ಮಾರ್ಚ್ 22ರಿಂದ ಆರಂಭವಾಗಲಿವೆ.
ಪ್ರಥಮ ಭಾಷೆ ಪರೀಕ್ಷೆಯೊಂದಿಗೆ ಆರಂಭವಾಗುವ ಪರೀಕ್ಷೆಗಳು ಏಪ್ರಿಲ್ 5ರಂದು ಸಮಾಜ ವಿಜ್ಞಾನ ಪರೀಕ್ಷೆಯೊಂದಿಗೆ ಮುಕ್ತಾಯಗೊಳ್ಳಲಿವೆ.