
ರಾಮಾಯಣ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಲಂಕೇಶ್ವರ ರಾವಣನ ಪಾತ್ರದಲ್ಲಿ ನಟಿಸಿರುವ ಯಶ್ ಅವರ ಅಭಿನಯಕ್ಕೆ ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
ಈ ಟ್ರೇಲರ್ ಹಾಲಿವುಡ್‌ನ 'ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ' ಚಿತ್ರದ ಜೊತೆಗೆ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಂಡಿದೆ.
ಯಶ್ ಅವರ ರೌದ್ರಾವತಾರ ಮತ್ತು ಪರದೆಯ ಮೇಲಿನ ಅಧಿಪತ್ಯವನ್ನು ಗಮನಿಸಿದರೆ, ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಲಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.