
ರಾಜ್ಯ ಸರ್ಕಾರವು ಉದ್ಯಾನಗಳ ರಕ್ಷಣೆ ಕಾಯಿದೆ 1975ಕ್ಕೆ ತಿದ್ದುಪಡಿ ತಂದು, ಉದ್ಯಾನಗಳ ಶೇ.5ರಷ್ಟು ಜಾಗವನ್ನು ವಾಣಿಜ್ಯ ಬಳಕೆಗೆ ನೀಡಲು ಮುಂದಾಗಿರುವುದಕ್ಕೆ ಸಂಸದ ತೇಜಸ್ವಿ ಸೂರ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಿಎಂ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಸೂರ್ಯ, ಬೆಂಗಳೂರಿನ ಶ್ವಾಸಕೋಶಗಳಾದ ಪಾರ್ಕ್ಗಳನ್ನು ರಿಯಲ್ ಎಸ್ಟೇಟ್ ಲಾಬಿಗೆ ಬಿಟ್ಟುಕೊಡದಂತೆ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಹ ಈ ಪ್ರಸ್ತಾವನೆಯನ್ನು ತೀವ್ರವಾಗಿ ಖಂಡಿಸಿದ್ದು, ಸರ್ಕಾರವು ಉದ್ಯಾನವನಗಳನ್ನು ಲಪಟಾಯಿಸಲು ಸಂಚು ರೂಪಿಸಿದೆ ಎಂದು ಆರೋಪಿಸಿದ್ದಾರೆ.