
ಜಪಾನ್‌ನ ಕೊರೋಗಿ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ನಡೆದ ಏಷ್ಯನ್ ಗೇಮ್ಸ್ 2026ರ ಕ್ರಿಕೆಟ್ ಚಿನ್ನದ ಪದಕದ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡವು ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್‌ಗೆ 216 ರನ್‌ಗಳ ಬೃಹತ್ ಮೊತ್ತ ಕಲೆಹಾಕಿದೆ.
ಉಪನಾಯಕಿ ಸ್ಮೃತಿ ಮಂಧಾನ 45 ಎಸೆತಗಳಲ್ಲಿ 7 ಸಿಕ್ಸರ್ ಹಾಗೂ 5 ಬೌಡರಿಗಳೊಡನೆ 79 ರನ್ ಗಳಿಸಿ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 11,000 ರನ್‌ಗಳ ಗಡಿ ದಾಟಿದ ವಿಶ್ವದ ಮೊದಲ ಮಹಿಳಾ ಕ್ರಿಕೆಟರ್ ಎನಿಸಿಕೊಂಡಿದ್ದಾರೆ.
ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ ಜೋಡಿಯು ಮೊದಲ ವಿಕೆಟ್‌ಗೆ 99 ರನ್ ಕಲೆಹಾಕುವುದರೊಂದಿಗೆ, ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಜಂಟಿಯಾಗಿ 4,000 ರನ್ ಪೂರೈಸಿದ ವಿಶ್ವದ ಮೊದಲ ಜೋಡಿ ಎಂಬ ದಾಖಲೆ ಬರೆಯಿತು.