
ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ಸ್ವಾಮಿ ವಿವೇಕಾನಂದರ ಏಕಶಿಲಾ ಮೂರ್ತಿಯನ್ನು ಉಡುಗೊರೆಯಾಗಿ ನೀಡಲಾಯಿತು.
ವಿಯೆಟ್ನಾಂ ಮಾರ್ಬಲ್ನಿಂದ ನಿರ್ಮಿಸಲಾದ ಈ ಮೂರ್ತಿಯು 1.5 ಅಡಿ ಎತ್ತರವಿದ್ದು, 8.5 ಕೆಜಿ ತೂಕವನ್ನು ಹೊಂದಿದೆ.
ಕನ್ಯಾಕುಮಾರಿಯ ವಿವೇಕಾನಂದ ರಾಕ್ ಮೆಮೋರಿಯಲ್ ಮಾದರಿಯನ್ನು ಆಧರಿಸಿದ ಈ ಮೂರ್ತಿಯನ್ನು ಆಶ್ರಮದ ಅಧ್ಯಕ್ಷ ಸ್ವಾಮಿ ಮುಕ್ತಿದಾನಂದಜೀ ಮಹಾರಾಜ್ ಅವರು ಪ್ರಧಾನಿಗೆ ಹಸ್ತಾಂತರಿಸಿದರು.