Indian Politics
ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನಾಳೆ ಪ್ರಮಾಣವಚನ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನಾಳೆ ಪ್ರಮಾಣವಚನ

tv9kannada1h
THE BRIEF
1

ಕರ್ನಾಟಕದ ನೂತನ ರಾಜ್ಯಪಾಲರಾಗಿ ಬಿಜೆಪಿಯ ಹಿರಿಯ ನಾಯಕಿ ಡಾ. ಸುಧಾ ಯಾದವ್ ನೇಮಕಗೊಂಡಿದ್ದು, ಅಕ್ಟೋಬರ್ 16ರಂದು ಬೆಂಗಳೂರಿನ ಲೋಕಭವನದ ಗಾಜಿನಮನೆಯಲ್ಲಿ ಬೆಳಿಗ್ಗೆ 10 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

2

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ನೂತನ ರಾಜ್ಯಪಾಲರಿಗೆ ಪ್ರಮಾಣವಚನ ಬೋಧಿಸಲಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ.

3

ಬರೋಬ್ಬರಿ ಐದು ವರ್ಷಗಳ ಕಾಲ ರಾಜ್ಯಪಾಲರಾಗಿದ್ದ ಥಾವರ್‌ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿ ಪೂರ್ಣಗೊಂಡಿದ್ದು, ನಿನ್ನೆ ಅವರಿಗೆ ಲೋಕಭವನದ ವತಿಯಿಂದ ಆತ್ಮೀಯ ಬೀಳ್ಕೊಡಿಗೆ ನೀಡಲಾಯಿತು.