
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಅಕ್ಟೋಬರ್ನಲ್ಲಿ ನಡೆಯಲಿರುವ ನಾಲ್ಕು ವಿಧಾನ ಪರಿಷತ್ ಕ್ಷೇತ್ರಗಳ ಚುನಾವಣೆ ಕುರಿತು ಚರ್ಚಿಸಲಾಯಿತು.
ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ಉಳಿದ ಒಂದು ಕ್ಷೇತ್ರಕ್ಕೆ ಜೆಡಿಎಸ್ ಜೊತೆ ಸಮಾಲೋಚನೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ವಿಜಯೇಂದ್ರ ತಿಳಿಸಿದರು.
ರಾಜ್ಯದಲ್ಲಿನ ಬರ ಪರಿಸ್ಥಿತಿ ಮತ್ತು ಕೆಪಿಎಸ್ಸಿ ಹಗರಣದ ಬಗ್ಗೆ ಮುಂಬರುವ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಹೋರಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.