
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಕೆಲಾಮ್ ಪ್ರದೇಶದಲ್ಲಿ ಶುಕ್ರವಾರ ಸಂಜೆ ನಡೆದ ಉಗ್ರರ ದಾಳಿಯಲ್ಲಿ ಛತ್ತೀಸ್ಗಢ ಮೂಲದ ದೀಪಕ್ ರಾತ್ರೆ ಮತ್ತು ಭೂಪೇಂದ್ರ ಭೈನಾ ಎಂಬ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.
ಉಗ್ರರು ಗುಂಡು ಹಾರಿಸುವ ಮುನ್ನ ಕಾರ್ಮಿಕರ ಜಾತಿ ಮತ್ತು ಸಮುದಾಯವನ್ನು ವಿಚಾರಿಸಿ, ಗುರುತು ಖಚಿತಪಡಿಸಿಕೊಂಡ ನಂತರವೇ ಈ ಕೃತ್ಯ ಎಸಗಿದ್ದಾರೆ ಎಂದು ಮೃತರ ಸಂಬಂಧಿಗಳು ಆರೋಪಿಸಿದ್ದಾರೆ.
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಭದ್ರತಾ ಪಡೆಗಳು ಉಗ್ರರ ಪತ್ತೆಗೆ ವ್ಯಾಪಕ ಶೋಧ ಕಾರ್ಯವನ್ನು ಆರಂಭಿಸಿವೆ.