
ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಯುನೈಟೆಡ್ ಕಿಂಗ್‌ಡಮ್, ಅಮೆರಿಕ ಮತ್ತು ಕೆನಡಾ ಪ್ರವಾಸ ಕೈಗೊಂಡಿದ್ದು, ನ್ಯೂಯಾರ್ಕ್‌ನ ಜೆಎಫ್‌ಕೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ಅವರ ಪ್ರವಾಸದ ಪ್ರಮುಖ ಆಕರ್ಷಣೆಯಾಗಿ ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ 5,000ಕ್ಕೂ ಹೆಚ್ಚು ಜನರ ಬೃಹತ್ ಸಮಾವೇಶ ನಡೆಯಲಿದೆ.
2014ರಲ್ಲಿ ಇದೇ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಸುಮಾರು 20,000 ಭಾರತೀಯ ಅಮೆರಿಕನ್ನರು ಪ್ರಧಾನಿ ಮೋದಿ ಅವರಿಗೆ ಅದ್ಧೂರಿ ಸ್ವಾಗತ ಕೋರಿದ್ದರು.