
ಬೆಂಗಳೂರಿನ ಕೋರಮಂಗಲದಲ್ಲಿರುವ ನೆಕ್ಸಸ್ ಮಾಲ್ನ ಫುಡ್ ಕೋರ್ಟ್ನಲ್ಲಿ ಘನತ್ಯಾಜ್ಯ ನಿರ್ವಹಣಾ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಜಿಬಿಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಸವನ್ನು ಸಮರ್ಪಕವಾಗಿ ವಿಂಗಡಿಸದ ಕಾರಣ ಮೆಕ್ಡೊನಾಲ್ಡ್ಸ್ ಸೇರಿದಂತೆ ಮಾಲ್ನ 10 ಮಳಿಗೆಗಳಿಗೆ ಒಟ್ಟು 85,000 ರೂಪಾಯಿ ದಂಡವನ್ನು ವಿಧಿಸಲಾಗಿದೆ.
ಸಾರ್ವಜನಿಕರ ಆರೋಗ್ಯ ಮತ್ತು ಸ್ವಚ್ಛತೆಯನ್ನು ಕಾಪಾಡುವ ಉದ್ದೇಶದಿಂದ ಈ ದಿಢೀರ್ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.