
ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿ ಎಸ್. ಮೇಘನಾ ತಮ್ಮ 30ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ಆಂಧ್ರ ಪ್ರದೇಶದ ಟಾಪ್ ಆರ್ಡರ್ ಬ್ಯಾಟರ್ ಆಗಿರುವ ಮೇಘನಾ, ಭಾರತದ ಪರ 17 ಟಿ20 ಹಾಗೂ 3 ಏಕದಿನ ಪಂದ್ಯಗಳನ್ನು ಆಡಿದ್ದು, ಡಬ್ಲ್ಯುಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರವೂ ಆಡಿದ್ದಾರೆ.
ಮುಂದಿನ ಪೀಳಿಗೆಯ ಆಟಗಾರರಿಗೆ ಮಾರ್ಗದರ್ಶನ ನೀಡುವುದು ಮತ್ತು ಕ್ರೀಡೆಗಾಗಿ ಕೆಲಸ ಮಾಡುವುದೇ ತನ್ನ ಮುಂದಿನ ಉದ್ದೇಶ ಎಂದು ಅವರು ತಿಳಿಸಿದ್ದಾರೆ.