
ನೀಟ್ ಪ್ರತಿಭಟನೆ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಪ್ರಕರಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ.
ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಅಡಿಯಲ್ಲಿ ದಾಖಲಾದ ಎಫ್‌ಐಆರ್ ಸಂಖ್ಯೆ 149ಕ್ಕೆ ತಡೆ ನೀಡುವಂತೆ ಸಿ.ಟಿ. ರವಿ ಪರ ವಕೀಲರು ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ವಿಚಾರಣೆಯನ್ನು ಜುಲೈ 31ಕ್ಕೆ ಮುಂದೂಡಲಾಗಿದೆ.
ಹೈಕೋರ್ಟ್ ಜುಲೈ 31ರವರೆಗೆ ಸಿ.ಟಿ. ರವಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚಿಸಿದ್ದು, ಜಾಮಿಯಾ ಮಸೀದಿ ಸಮಿತಿಯ ಅಧ್ಯಕ್ಷ ಮುದಾಸಿರ್ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಾಗಿತ್ತು.