
ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ಮೂರನೇ ಹಂತದಲ್ಲಿ ಮತ್ತೆ 53 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ.
ಹೊಸದಾಗಿ ಘೋಷಿಸಲಾದ 53 ತಾಲೂಕುಗಳ ಪೈಕಿ 51 ತಾಲೂಕುಗಳು ತೀವ್ರ ಹಾಗೂ 2 ತಾಲೂಕುಗಳು ಸಾಧಾರಣ ಬರಪೀಡಿತವಾಗಿದ್ದು, ಒಟ್ಟು ತಾಲೂಕುಗಳ ಸಂಖ್ಯೆ 177ಕ್ಕೆ ಏರಿದೆ.
ರಾಜ್ಯದಲ್ಲಿ ಈ ವರ್ಷ ಒಟ್ಟಾರೆ ಶೇಕಡಾ 36ರಷ್ಟು ಮಳೆ ಕೊರತೆ ಉಂಟಾಗಿದ್ದು, ಬೆಳೆ ಹಾನಿಯ ನೈಜ ಚಿತ್ರಣ ಆಧರಿಸಿ ರೈತರಿಗೆ ನೆರವು ನೀಡಲಾಗುವುದು ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.