
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿಚಾರವಾಗಿ ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಸಂಘರ್ಷ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಹುಲ್ ಗಾಂಧಿ ಅವರ ನೇರ ಸವಾಲುಗಳಿಗೆ ತಿರುಗಿದೆ.
ಎಸ್‌ಐಆರ್, ಇವಿಎಂ ಮತ್ತು ಅಕ್ರಮ ವಲಸಿಗರ ವಿಚಾರಗಳ ಬಗ್ಗೆ ಸಂಸತ್ತಿನಲ್ಲೇ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದ್ದು, ಅಗತ್ಯವಿದ್ದರೆ ವಿಶೇಷ ಅಧಿವೇಶನ ಕರೆಯಬಹುದು ಎಂದು ಅಮಿತ್ ಶಾ ಸವಾಲು ಹಾಕಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬೃಹತ್ ರ್ಯಾಲಿ ನಡೆಸಿದ್ದರು.