
ಆನ್‌ಲೈನ್ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ಪ್ರಾಣಾಪಾಯ ಉಂಟುಮಾಡಬಲ್ಲ ವಿಷಕಾರಿ ದತ್ತೂರಿ ಹಣ್ಣು ಮತ್ತು ಬೀಜಗಳನ್ನು ಮಾರಾಟ ಮಾಡುತ್ತಿರುವುದನ್ನು ಆಹಾರ ಮತ್ತು ಔಷಧ ಆಡಳಿತ ಇಲಾಖೆ ಗಂಭೀರವಾಗಿ ಪರಿಗಣಿಸಿದೆ.
ಅಮೆಜಾನ್ ಸೇರಿದಂತೆ ಹಲವು ಇ-ಕಾಮರ್ಸ್ ಸಂಸ್ಥೆಗಳಿಗೆ ಎಫ್‌ಡಿಎ ನೋಟಿಸ್ ಜಾರಿಗೊಳಿಸಿದ್ದು, ವಿಚಾರಣೆ ವೇಳೆ ಅಮೆಜಾನ್ ಪ್ರತಿನಿಧಿಗಳು ಸ್ಪಷ್ಟನೆ ನೀಡಲು ವಿಫಲರಾಗಿ ಹೆಚ್ಚುವರಿ ಕಾಲಾವಕಾಶ ಕೋರಿದ್ದಾರೆ.
ದತ್ತೂರಿ ಸಸ್ಯದ ಹಣ್ಣು ಅಥವಾ ಬೀಜಗಳನ್ನು ಸೇವಿಸುವುದರಿಂದ ನರಮಂಡಲಕ್ಕೆ ತೀವ್ರ ಹಾನಿಯಾಗಿ ಸಾವು ಸಂಭವಿಸುವ ಸಾಧ್ಯತೆ ಇರುವುದರಿಂದ ಇಲಾಖೆಯು ತನಿಖೆಯನ್ನು ರಾಜ್ಯಾದ್ಯಂತ ವಿಸ್ತರಿಸಿದೆ.