
ದಸರಾ, ದೀಪಾವಳಿ ಮತ್ತು ಛತ್ ಪೂಜೆ ಹಬ್ಬಗಳ ಪ್ರಯಾಣಿಕರ ದಟ್ಟಣೆ ತಡೆಯಲು ಬೆಂಗಳೂರಿನ ವಿಶೇಷ ರೈಲುಗಳ ಸೇವೆಯನ್ನು ನವೆಂಬರ್ ವರೆಗೆ ವಿಸ್ತರಿಸಲಾಗಿದೆ.
ವಿಶಾಖಪಟ್ಟಣಂ-ಎಸ್ಎಂವಿಟಿ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸೇವೆಯನ್ನು ನವೆಂಬರ್ ಅಂತ್ಯದವರೆಗೆ ವಿಸ್ಡತಗೊಳಿಸಲಾಗಿದೆ.
ಜೊತೆಗೆ ದರ್ಗಾ ಶರೀಫ್ ಉರ್ಸ್ ಹಾಗೂ ವಿವಿಧ ಉತ್ಸವಗಳ ನಿಮಿತ್ತ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಮುಖ ನಿಲ್ದಾಣಗಳಲ್ಲಿ ರೈಲುಗಳಿಗೆ ತಾತ್ಕಾಲಿಕ ನಿಲುಗಡೆ ನೀಡಲಾಗಿದೆ.