
ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಆರೋಪಿಯಾಗಿರುವ ಮಾಜಿ ಸಚಿವ ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ (ED) ಸೆಪ್ಟೆಂಬರ್ 7ರಂದು ವಿಚಾರಣೆ ನಡೆಸಿದೆ.
ನಾಗೇಂದ್ರ ಅವರನ್ನು ಸುಮಾರು ಐದು ಗಂಟೆಗಳ ಕಾಲ ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿದ್ದು, ಈ ಹಿಂದೆ ಹಗರಣದ ಹಿನ್ನೆಲೆಯಲ್ಲಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ವಿಚಾರಣೆಯ ನಂತರ ಹೊರಬಂದ ನಾಗೇಂದ್ರ ಅವರು ಬಿಜೆಪಿಯ ಬಳ್ಳಾರಿ ಪಾದಯಾತ್ರೆಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.