
ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಚಿಕ್ಕಣ್ಣ ಅವರು ಆಗಸ್ಟ್ 30 ರಂದು ಮೈಸೂರಿನ ಕಲ್ಯಾಣ ಮಂಟಪದಲ್ಲಿ ಪಾವನಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬೆಳಗ್ಗೆ 10.45 ರಿಂದ 11.25 ರ ನಡುವಿನ ಶುಭ ಮುಹೂರ್ತದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ವಿವಾಹ ಸಮಾರಂಭವು ನೆರವೇರಿದೆ.
ವಿವಾಹ ಸಮಾರಂಭಕ್ಕೆ ಚಿತ್ರರಂಗದ ಸೆಲೆಬ್ರಿಟಿಗಳು ಮತ್ತು ರಾಜಕೀಯ ಗಣ್ಯರು ಆಗಮಿಸಿದ್ದು, ಕಲ್ಯಾಣ ಮಂಟಪಕ್ಕೆ ಬಿಗಿ ಭದ್ರತೆಯನ್ನು ಒದಗಿಸಲಾಗಿತ್ತು.