
ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಸರ್ಕಾರ 8,000 ಕೋಟಿ ರೂ. ವೆಚ್ಚ ಮಾಡಲು ಸಿದ್ಧತೆ ನಡೆಸಿದ್ದು, ಕಳೆದ ಮೂರು ವರ್ಷಗಳಲ್ಲಿ 5,500 ಕೋಟಿ ರೂ. ಖರ್ಚಾದರೂ ಸುಧಾರಣೆ ಕಂಡಿಲ್ಲ ಎಂದು ತೇಜಸ್ವಿ ಸೂರ್ಯ ಟೀಕಿಸಿದ್ದಾರೆ.
ನಮ್ಮ ಮೆಟ್ರೋ ಸೇವೆಯು ಕಳೆದ ಒಂದು ವರ್ಷದಲ್ಲಿ 21 ಬಾರಿ ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದ್ದು, ದರ ದುಬಾರಿಯಾಗಿದ್ದರೂ ಸೇವೆ ಕಳಪೆಯಾಗಿದೆ ಎಂದು ಸಂಸದರು ಆರೋಪಿಸಿದ್ದಾರೆ.
ನಗರದ ಆರೆಂಜ್ ಮತ್ತು ರೆಡ್ ಲೈನ್ ಮೆಟ್ರೋ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಚಿವ ಕೃಷ್ಣಭೈರೇಗೌಡ ನೇತೃತ್ವದ ಸಭೆಯಲ್ಲಿ ಮನವಿ ಮಾಡಲಾಗಿದೆ.