
ಆಯುಷ್ಮಾನ್ ಭಾರತ್ ಯೋಜನೆಯಡಿ ಅರ್ಹ ಬಡ ಕುಟುಂಬಗಳು ವಾರ್ಷಿಕ 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಯನ್ನು ಪಡೆಯಲು ಇ-ಕೆವೈಸಿ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ.
ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್ ಮತ್ತು ಅದಕ್ಕೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು ಬಳಸಿ 'ಆಯುಷ್ಮಾನ್ ಆಪ್' ಮೂಲಕ ಮನೆಯಿಂದಲೇ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.
ಇ-ಕೆವೈಸಿ ಪ್ರಕ್ರಿಯೆಯಲ್ಲಿ ಆಧಾರ್ ಒಟಿಪಿ, ಬಯೋಮೆಟ್ರಿಕ್ ಅಥವಾ ಮುಖದ ದೃಢೀಕರಣದ ಮೂಲಕ ಗುರುತನ್ನು ಖಚಿತಪಡಿಸಿಕೊಂಡ ನಂತರ ಹೊಸ ಆಯುಷ್ಮಾನ್ ಕಾರ್ಡ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.