
ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 1ರಂದು ಮೈಸೂರಿಗೆ ಭೇಟಿ ನೀಡಲಿದ್ದು, ರಾಮಕೃಷ್ಣ ಆಶ್ರಮದಲ್ಲಿ ನಿರ್ಮಿಸಲಾಗಿರುವ 'ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವಜನ ಕೇಂದ್ರ'ವನ್ನು ಉದ್ಘಾಟಿಸಲಿದ್ದಾರೆ.
ಮಧ್ಯಾಹ್ನ 3:30 ರಿಂದ ಸಂಜೆ 5:15 ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರಧಾನಿ, ಸಂಜೆ 5:55ಕ್ಕೆ ವಿಶೇಷ ವಿಮಾನದ ಮೂಲಕ ದೆಹಲಿಗೆ ವಾಪಸಾಗಲಿದ್ದಾರೆ.
ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ನಗರದ ಕೆ.ಆರ್.ಬಿ ರಸ್ತೆ, ಬೋಗಾದಿ ರಸ್ತೆ ಸೇರಿದಂತೆ 12 ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.